ಕೇಂದ್ರದಿಂದ ರಾಜ್ಯಕ್ಕೆ ದೀಪಾವಳಿ ಧಮಾಕ: 3 ಜಿಲ್ಲೆಗಳಿಗೆ ಮೆಡಿಕಲ್ ಕಾಲೇಜು...Medical college# Karnataka#..

Fri, Oct 25, 2019

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಡಿ ರಾಜ್ಯದ ಮೂರು ಜಿಲ್ಲೆ ಗಳಿಗೆ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅನುಮತಿ ದೊರೆತಿದೆ.

ಚಿಕ್ಕಮಗಳೂರು, ಯಾದಗಿರಿ, ಹಾವೇರಿ ಜಿಲ್ಲಾ ಆಸ್ಪತ್ರೆಗೆ ಹೊಂದಿಕೊಂಡ ಹಾಗೆ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿದೆ. ಇದರನ್ವಯ ಪ್ರತಿ ಕಾಲೇಜಿಗೆ  325 ಕೋಟಿ ಅನುಮೋದನೆ ನೀಡಲಾಗಿದೆ. ಇದರಲ್ಲಿ ಶೇ.60 ರಷ್ಟು ಕೇಂದ್ರ ಮತ್ತು ಶೇ.40 ರಷ್ಟು ರಾಜ್ಯ ಸರ್ಕಾರ ಅನುದಾನ ನೀಡಲಿವೆ. 

ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ :-


 ಚಿಕ್ಕಮಗಳೂರಿನ ವೈದ್ಯಕೀಯ ಕಾಲೇಜು ನಿರ್ಮಾಣದ ಕುರಿತು ಟ್ವೀಟ್ ಮಾಡಿರುವ  ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ BSY ಮತ್ತು ಹರ್ಷವರ್ಧನ್ ರವರಿಗೆ ಧನ್ಯವಾದ ತಿಳಿಸಿದ್ದಾರೆ.

Like our news?