ಮಸೀದಿ ಪ್ರವೇಶ ಅವಕಾಶಕ್ಕಾಗಿ ಮುಸ್ಲಿಂ ಮಹಿಳೆಯರ ಮನವಿ; ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್.... #Government #supream court #Muslim #women's...

Fri, Oct 25, 2019

ನವದೆಹಲಿ: ಮಸೀದಿಗಳಲ್ಲಿ ಮಹಿಳೆಯರ ಪ್ರವೇಶ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಅಭಿಪ್ರಾಯ ಕೇಳಿದೆ.


ಹೌದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಕೇಂದ್ರ ಕಾನೂನು ಮತ್ತು ನ್ಯಾಯ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ನೊಟೀಸ್ ಜಾರಿ ಮಾಡಿ ಮಸೀದಿಗಳಿಗೆ ಮಹಿಳೆಯರ ಪ್ರವೇಶ ಕುರಿತು ಪ್ರತಿಕ್ರಿಯೆ ಕೇಳಿದೆ.

                   ◆ ಜಾಹೀರಾತು


ಮಸೀದಿಗಳಿಗೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವ ಮೂಲಕ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ, ಹೀಗಾಗಿ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರದ ಅಧಿಕಾರಿಗಳು ಮತ್ತು ವಕ್ಫ್ ಮಂಡಳಿಯಂತಹ ಮುಸ್ಲಿಂ ಸಂಸ್ಥೆಗಳಿಗೆ ಆದೇಶ ನೀಡಬೇಕೆಂದು ಯಾಸೀಮ್ ಝುಬರ್ ಅಹ್ಮದ್ ಪೀರ್ಜಡೆ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದರು.

Like our news?