ವೀರಪ್ಪನ್ ಸಹಚರನ ಪತ್ನಿ ಅರೆಸ್ಟ್....#Virappan#Stella#Arrested#..

Mon, Feb 03, 2020

ಚಾಮರಾಜನಗರ: 27 ವರ್ಷಗಳ ಬಳಿಕ ಮೂರು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರನ ಪತ್ನಿಯನ್ನು ಕೊಳ್ಳೇಗಾಲ ಅಪರಾಧ ಪತ್ತೆ ವಿಭಾಗ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಸ್ಟೆಲ್ಲಾ ಅಲಿಯಾಸ್ ಸ್ಟೆಲ್ಲಾಮೇರಿ ಬಂಧಿತ ಆರೋಪಿ. ಒಂದುವರೆ ವರ್ಷ ವೀರಪ್ಪನ್ ತಂಡದಲ್ಲೇ ಇದ್ದ ಈಕೆ ವಿರುದ್ಧ  ಪಾಲಾರ್ ಬಾಂಬ್ ಸ್ಫೋಟ, ರಾಮಾಪುರ ಠಾಣೆಗೆ ಬೆಂಕಿ, ಶಸ್ತ್ರಾಸ್ತ್ರ ಹೊತ್ತೊಯ್ದ ಪ್ರಕರಣದ ಆರೋಪ ಸೇರಿದಂತೆ, ಟಾಡಾ ಪ್ರಕರಣದಡಿ ಬಂಧಿಸಲಾಗಿದೆ..

Like our news?
Copyrights

*