೨ ತಿಂಗಳ ಪಡಿತರ ಮುಂಚಿತವಾಗಿ ವಿತರಣೆ,ನರೇಗಾ ಕೂಲಿಕಾರರ ೨ ತಿಂಗಳ ಹಣ ಮುಂಗಡ;CM BSY...! #CM #BSY #Karnataka #BJP #Announcement...

ಬೆಂಗಳೂರು: ಕೊರೊನಾ ವೈರಸ್‍ನಿಂದಾಗಿ ಬಡವರಿಗೆ ಹೊರೆ ಆಗದೇ ಇರಲು ರಾಜ್ಯ ಸರ್ಕಾರ ಹಲವು ಘೋಷಣೆಗಳನ್ನು ಪ್ರಕಟಿಸಿದೆ.

ಹೌದು ,ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ , ರಾಜ್ಯದಲ್ಲಿ ಕೋವಿಡ್ 19 ಮಹಾಮಾರಿ ಕಾಣಿಸಿಕೊಂಡಿದೆ. ಹೀಗಾಗಿ 2 ತಿಂಗಳ ಪಡಿತರ ಮುಂಚಿತವಾಗಿ ಕೊಡುತ್ತಿದ್ದೇವೆ. 13.20 ಕೋಟಿ ರೂ ಬಡವರ ಬಂಧು ಸಾಲ ಮನ್ನಾ ಮಾಡಲಾಗುವುದು ಮತ್ತು ಸಾಮಾಜಿಕ ಭದ್ರತಾ ಪಿಂಚಣಿ ಮುಂಗಡವಾಗಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ.ನರೇಗಾ ಕೂಲಿಕಾರರಿಗೆ ಎರಡು ತಿಂಗಳ ಮುಂಗಡ ಹಣ ನೀಡಲಾಗುವುದು ಎಂದು ಭರವಸೆ ನೀಡಿದರು. 


ಈ ವೈರಾಣು ನಿಯಂತ್ರಣಕ್ಕೆ ಸರ್ಕಾರವು ಶಕ್ತಿ ಮೀರಿ ಶ್ರಮಿಸುತ್ತಿದೆ. ಕೊರೊನಾಗೆ ದೇಶದಲ್ಲಿ ಮೊದಲ ಸಾವು ಕರ್ನಾಟಕದಲ್ಲೇ ಆಗಿದ್ದರೂ ಸೋಂಕು ಹರಡದಂತೆ ತಡೆದಿದ್ದೇವೆ. ನಮ್ಮ ಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಜನರು ಇಂತಹ ಪರಿಸ್ಥಿತಿಯಿಂದ ಬಹುಬೇಗ ಗುಣಮುಖರಾಗಿ ಹೊರಬರುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

Like our news?
Copyrights

BD1 News Kannada

This is BD1 News which covers News of Every Village To Entire World