ವಿಜಯಪುರ ಜಿಲ್ಲೆಯಾದ್ಯಂತ ಚಾಲ್ತಿಯಲ್ಲಿವೆ 40 ಕಂಟೇನ್ಮೈಂಟ್ ಝೋನ್..!

Fri, Jun 26, 2020

ವಿಜಯಪುರ: ಸಾಂಕ್ರಾಮಿಕವಾಗಿ ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕಂಟೇನ್ಮೆಂಟ್ ವಲಯಗಳಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ತಹಶಿಲ್ದಾರರು ಮತ್ತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾಂಕ್ರಾಮಿಕವಾಗಿ ಹರಡುತ್ತಿರುವ ಕೋವಿಡ್-19 ಕುರಿತು ಅವಶ್ಯಕ ಮುನ್ನೆಚ್ಚರಿಕೆ ಕೈಗೊಳ್ಳಬೇಕು. 60 ಕ್ಕಿಂತ ಮೇಲ್ಪಟ್ಟ ವಯೋಮಾನದ ವಯೋವೃದ್ಧರು, 10 ವರ್ಷದೊಳಗಿನ ಮಕ್ಕಳು ಯಾವುದೇ ಪರಿಸ್ಥಿತಿಯಲ್ಲಿ ಹೊರಗೆ ಬರದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ  ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. 


ಅತಿಹೆಚ್ಚು ಜನಸಂದಣಿ, ಕೊಳಗೇರಿ ಪ್ರದೇಶಗಳಲ್ಲಿ ಸಾರ್ವಜನಿಕರೆಲ್ಲರು ಎಚ್ಚರಿಕೆ ಇಂದ ಇದ್ದು ಸೂಕ್ತ ಮುಂಜಾಗೃತೆ ವಹಿಸಿಕೊಳ್ಳಬೇಕು. ಜಿಲ್ಲಾದ್ಯಂತ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳುವಂತೆ  ಮತ್ತು ತೀರಾ ಅವಶ್ಯಕ ಕಾರ್ಯಗಳಿದ್ದಾಗ ಮಾತ್ರ ಮನೆಯಿಂದ ಹೊರ ಬರುವಂತೆ ಮತ್ತು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ. 


ಜಿಲ್ಲಾದ್ಯಂತ ಕೋವಿಡ್-19 ಮುನ್ನೆಚ್ಚರಿಕೆಯಾಗಿ ಕಂಟೇನ್ಮೆಂಟ್ ವಲಯಗಳಲ್ಲಿ ತೀವ್ರ ಕಟ್ಟೆಚ್ಚರ ಒಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಜಿಲ್ಲೆಯಾದ್ಯಂತ ಈವರೆಗೆ ಒಟ್ಟು 85 ಕಂಟೇನ್ಮೆಂಟ್ ವಲಯಗಳನ್ನು ಗೊತ್ತುಪಡಿಸಿದ್ದು, ಚಾಲ್ತಿಯಲ್ಲಿರುವ 40 ಕಂಟೇನ್ಮೆಂಟ್ ಝೋನ್‍ಗಳಿವೆ. ಈವರೆಗೆ ಒಟ್ಟು 45 ಕಂಟೇನ್ಮೆಂಟ್ ವಲಯಗಳನ್ನು ಡಿ ನೋಟಿಫಿಕೇಶನ್ ಮಾಡಲಾಗಿದೆ.

ವಿಜಯಪುರ ನಗರದಲ್ಲಿ 20, ವಿಜಯಪುರ ಗ್ರಾಮಾಂತರದಲ್ಲಿ 2, ಬಬಲೇಶ್ವರದಲ್ಲಿ 1, ತಿಕೋಟಾದಲ್ಲಿ 1, ಬ,ಬಾಗೇವಾಡಿಯಲ್ಲಿ ಯಾವುದೇ ಕಂಟೇನ್ಮೆಂಟ್ ವಲಯಗಳಿಲ್ಲ, ನಿಡಗುಂದಿಯಲ್ಲಿ 2, ಕೋಲ್ಹಾರ-ಇಲ್ಲ, ಇಂಡಿ-7, ಚಡಚಣ-1, ಮುದ್ದೇಬಿಹಾಳ-4, ತಾಳಿಕೋಟೆ-ಇಲ್ಲ, ಸಿಂದಗಿ-2, ದೇವರ ಹಿಪ್ಪರಗಿ-ಇಲ್ಲ ಹೀಗೆ ಒಟ್ಟು 40 ಕಂಟೇನ್ಮೆಂಟ್ ವಲಯಗಳು ಚಾಲ್ತಿಯಲ್ಲಿವೆ ಎಂದು ತಿಳಿಸಿದ್ದಾರೆ.

ಜಿಲ್ಲಾದ್ಯಂತ ಇರುವ ಕಂಟೇನ್ಮೆಂಟ್ ವಲಯಗಳ ವಿವರ ಈ ರೀತಿಯಾಗಿದೆ. ವಿಜಯಪುರ ನಗರದ ಅಲ್ಲಾಪುರ ಬೇಸ್, ಗ್ಯಾಂಗ್ ಬಾವಡಿ, ತಾಜ್ ಬಾವಡಿ, ರಾಜಾಜಿನಗರ, ಮೇಹಬೂಬ್‍ನಗರ(ಕೆ.ಎಚ್.ಬಿ), ಹರಣಶಿಕಾರ ಗಲ್ಲಿ, ಗೋಳಗುಮ್ಮಟ ಎದರು, ಆದರ್ಶನಗರ, ಗಿಸಾಡಿ ಓಣಿ(ಇಂಡಿ ರಸ್ತೆ), ಮಿಷನ್ ಕಂಪೌಂಡ್, ರೈಲ್ವೆ ನಿಲ್ದಾಣ, ಅಪ್ಸರಾ ಥೇಟರ್, ಸಕಾಫ್ ರೋಜಾ, ಹಬೀಬನಗರ(ಅಥಣಿ ರಸ್ತೆ), ನವಬಾಗ, ನಾಗರಬೌಡಿ, ಜುಮ್ಮಾ ಮಸಿದಿ ಹಿಂಬಾಗ, ಎಸ್.ಪಿ ಕಾಲೋನಿ, ಶಿಕಾರಖಾನೆ, ಅಕ್ಕಿ ಕಾಲೋನಿ, ವಿಜಯಪುರ ಗ್ರಾಮಾಂತರದಲ್ಲಿ ಹೆಗಡಿಹಾಳ ತಾಂಡಾ, ಅದರಂತೆ ಬಬಲೇಶ್ವರ ತಾಲೂಕಿನ ತೋನಶಾಳ, ತಿಕೋಟಾ ತಾಲೂಕಿನ ಇಟ್ಟಂಗಿಹಾಳ, ನಿಡಗುಂದಿ ತಾಲೂಕಿನ ಬಳಬಟ್ಟಿ, ವಡವಡಗಿ ತಾಂಡಾ, ಇಂಡಿ ತಾಲೂಕಿನ ಅಥರ್ಗಾ, ಮಿರಗಿ, ಸಾಲೋಟಗಿ ರಸ್ತೆ ಇಂಡಿ, ಹಿರೆದೇವಣೂರ, ಕೋರ್ಟ ಹತ್ತಿರ ಇಂಡಿ, ಹಿಂಗಣಿ, ಹಿಂಗಣಿ(ತೋಟ), ಚಡಚಣ ತಾಲೂಕಿನ ಹಲಸಂಗಿ, ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳ ನಗರ, ಗಣೇಶ ನಗರ, ಮುದ್ದೇಬಿಹಾಳ, ದೋಟೆಗಲ್ಲಿ, ಮುದ್ದೇಬಿಹಾಳ, ಎರಗಲ್, ಸಿಂದಗಿ ತಾಲೂಕಿನ ಆಲಮೇಲ್, ಮತ್ತು ವಾರ್ಡ್ ನಂಬರ 07 ಹಾಗೂ ಸಿಂದಗಿಗಳಲ್ಲಿ ಕಂಟೇನ್ಮೆಂಟ್ ವಲಯಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಅದರಂತೆ ವಿಜಯಪುರ ನಗರದ 5, ಬಬಲೇಶ್ವರದ 2, ತಿಕೋಟಾದ 3, ಬ.ಬಾಗೇವಾಡಿಯ 6, ನಿಡಗುಂದಿಯ 1, ಇಂಡಿಯ 3, ಚಡಚಣದ 3, ಮುದ್ದೇಬಿಹಾಳದ 3, ತಾಳಿಕೊಟೆಯ 7, ಸಿಂದಗಿಯ 6, ದೇವರ ಹಿಪ್ಪರಗಿಯ 6 ಕಂಟೇಂನ್ಮೆಂಟ್ ವಲಯಗಳು ಸೇರಿದಂತೆ ಒಟ್ಟು 45 ವಲಯಗಳನ್ನು ಡಿ ನೋಟಿಫಿಕೇಶನ್ ಮಾಡಲಾಗಿದೆ ಎಂದು  ಮಾಹಿತಿ ನೀಡಿದ್ದಾರೆ.

Like our news?
Copyrights

.