ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ದೃಡ..! #Karnataka #ExCm #Siddaramaiah

Tue, Aug 04, 2020

ಬೆಂಗಳೂರು: ಕಳೆದ 15 ದಿನಗಳ ಹಿಂದೆ ಸಿದ್ದರಾಮಯ್ಯ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಗ ಡಾ. ಯತೀಂದ್ರ ಅವರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರನ್ನು ರಾತ್ರಿ 3:30ರ ಸುಮಾರಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು  ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಕೊರೋನಾ ಟೆಸ್ಟ್ ನಡೆಸಲಾಗಿದ್ದು ಕೊರೋನಾ ಪಾಸಿಟಿವ್ ದೃಡಪಟ್ಟಿದೆ.


ಪುತ್ರ ಡಾ. ಯತೀಂದ್ರ ಈ ಕುರಿತು ಟ್ವೀಟ್ ಮಾಡಿದ್ದು ಸಂಪರ್ಕಕ್ಕೆ ಬಂದವರೆಲ್ಲ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

Like our news?
Copyrights