ಅಕ್ರಮ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ : ಇಬ್ಬರು ಯುವತಿಯರ ರಕ್ಷಣೆ...! #illegal activity #Karnataka #Police ride

Tue, Jun 08, 2021

ಮಂಡ್ಯ : ಲಾಡ್ಜ್ ವೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದವರನ್ನು  ಮಳವಳ್ಳಿ ಟೌನ್ ಪೊಲೀಸರು ಬಂಧಿಸಿದ್ದಾರೆ...


ಹೌದು, ಮಳವಳ್ಳಿ  ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ನಲ್ಲಿ  ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ತಡರಾತ್ರಿ ಕಾರ್ಯಾಚರಣೆ  ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ...

ಈ ಘಟನೆಗೆ ಸಂಬಂಧಿಸಿದಂತೆಮಳವಳ್ಳಿ ಟೌನ್ ಪೊಲೀಸರು ಪ್ರಕರಣ ದಾಖಲಿಸಿದ್ದು,  ನಾಲ್ವರು ಯುವಕರನ್ನು ಬಂಧಿಸಿ ಇಬ್ಬರು ಯುವತಿಯನ್ನು ರಕ್ಷಣೆ ಮಾಡಿದ್ದಾರೆ...

Like our news?