ರಾಜ್ಯದಲ್ಲಿ 11 ಜಿಲ್ಲೆಯಲ್ಲಿ ಲಾಕ್ ಡೌನ್ ಕಂಟ್ಯನ್ಯೂ ; ಉಳಿದ ಜಿಲ್ಲೆಗಳಲ್ಲಿ ಕೊಂಚ ರೀಲಿಫ್ ಇಲ್ಲಿದೆ ನೋಡಿ ಡಿಟೆಲ್ಸ್..! #Karnataka #Unlock #by #BSY

Thu, Jun 10, 2021

ಬೆಂಗಳೂರು : ರಾಜ್ಯದ 10 ಜಿಲ್ಲೆಗಳಲ್ಲಿ ಜೂನ್ 14 ರ ನಂತರ ಲಾಕ್ ಡೌನ್ ಮುಂದುವರೆಯಲಿದೆ ಮತ್ತು ಉಳಿದ ಜಿಲ್ಲೆಗಳಲ್ಲಿ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.


ಇಂದು ಸಂಜೆ ಬೆಂಗಳೂರಿನ ಗೃಹ ಕಛೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ  ಅಧಿಕಾರಿಗಳ ಸಭೆ ಬಳಿಕ ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ , ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ ಕೊಡಗು ಜಿಲ್ಲೆಯಲ್ಲಿ ಜೂನ್ 14 ರ ಬೆಳಿಗ್ಗೆ ಆರು ಗಂಟೆಯಿಂದ ಜೂನ್ 21 ರ ವರೆಗೆ ವಿಸ್ತರಿಸಿದೆ ಎಂದು ತಿಳಿಸಿದ್ದಾರೆ. 


ಇನ್ನುಳಿದ ಜಿಲ್ಲೆಗಳಲ್ಲಿ ಕೆಲ ಸಡಿಲಿಕೆ ಮಾಡಿದ್ದಾರೆ.

ಏನಿರುತ್ತೆ? ಏನಿರಲ್ಲ? 

ಎಲ್ಲ ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಖಾನೆಗಳು ಕಾರ್ಯ ನಡೆಸಬಹುದು.


ಮದ್ಯ ಮಾರಾಟ , ಬಾರ್ ಆಂಡ್ ರೆಸ್ಟೋರೆಂಟ್ ಗಳಲ್ಲಿ ಮದ್ಯ ಖರೀದಿಗೆ ಮದ್ಯಾಹ್ನ 2 ಗಂಟೆಯವರೆಗೆ ಅವಕಾಶ

ಗಾರ್ಮೆಂಟ್ಸ್ ಗಳಿಗೆ ಶೇ.30ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶ  ಮಧ್ಯಾಹ್ನ 2 ಗಂಟೆವರೆಗೆ ದಿನಸಿ ಅಂಗಡಿಗಳು ತೆರೆಯಬಹುದು 


ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಬೀದಿ ಬದಿ ವ್ಯಾಪಾರ  

ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ನೈಟ್ ಕರ್ಫ್ಯೂ  ವೀಕೆಂಡ್ ಲಾಕ್‍ಡೌನ್, 

ಶುಕ್ರವಾರ ರಾತ್ರಿ 7ರಿಂದ ಬೆಳಗ್ಗೆ 5 ಗಂಟೆವರೆಗೂ ಇರಲಿದೆ. 


ಬಿಎಂಟಿಸಿ, ಕೆಎಸ್‍ಆರ್ ಟಿಸಿ ಬಸ್ ಸಂಚಾರ ಇಲ್ಲ. 


 ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಬಹುದು.

Like our news?