ನಾನು ಶ್ರೀ ಅರುಣ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿಲ್ಲ ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಫೇಸ್ಬುಕ್ ಪೋಸ್ಟ್ ಮೂಲಕ ಟಾಂಗ್..! #MLA #Basangouda_Patil #Facebook #Post

Thu, Jun 17, 2021


ವಿಜಯಪುರ : "ನಾನು ಅರುಣ್ ಸಿಂಗ್ ಭೇಟಿಗೆ ಅವಕಾಶ ಕೇಳಿಲ್ಲ ಸುಳ್ಳು ಸುದ್ದಿ ಭಿತ್ತರಿಸಬೇಡಿ " ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಮ್ಮ ಫೇಸ್ಬುಕ್ ಪೋಸ್ಟ್ ಮಾಡಿದ್ದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಅವಕಾಶ ಕೇಳಿದ ಕೆಲವರ ಪಟ್ಟಿ ಪೋಸ್ಟ್ ಮಾಡುವ ಮೂಲಕ  ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.


ಹೌದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣ ಕುರಿತು ಹೇಳಿಕೆ ನೀಡುತ್ತಿದ್ದ ಶಾಸಕ ಯತ್ನಾಳ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರ ಭೇಟಿಗೆ ಅವಕಾಶ ಕೋರಿದ್ದಾರೆ ಎಂದು ಸಾಕಷ್ಟು ಊಹಾಪೋಹಗಳು ಕೇಳಿ ಬಂದಿದ್ದವು ಈ ಹಿನ್ನಲೆಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಗ್ಗೆ ತಲೆಕೆಡಿಸಿಕೊಳ್ಳದೆ ತಾವು ಯಾರಿಗೂ ಅವಕಾಶ ಕೇಳಿಲ್ಲ ಅವಕಾಶ ಕೇಳಿದವರ ಪಟ್ಟಿ ಇಲ್ಲಿದೆ ನೋಡಿ ಎನ್ನುವಂತೆ ಸಾಕ್ಷ್ಯ ಸಮೇತ ಪೋಸ್ಟ್ ಮಾಡಿದ್ದಾರೆ.

Like our news?