ಬೈಕ್ ಗೆ ಕಾರು ಡಿಕ್ಕಿ ; ಸ್ಥಳದಲ್ಲೇ ಪ್ರಾಣಬಿಟ್ಟ ಬೈಕ್ ಸವಾರ ..!

Mon, Jul 19, 2021

ವಿಜಯಪುರ : ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಬಳಿ ಘಟನೆ ನಡೆದಿದೆ.


ಸಿಂದಗಿ ತಾಲ್ಲೂಕಿನ ಜಲಪುರ ನಿವಾಸಿ ಮಲ್ಲಪ್ಪ ಭೀಮಪ್ಪ ತುಂಬಗಿ(26) ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ.


ಬೈಕ್ ಗೆ ಡಿಕ್ಕಿಯಾದ ಕಾರು ನಿಯಂತ್ರಣ ತಪ್ಪಿ ಎದುರಿಗೆ ಬರ್ತಿದ್ದ ಬುಲೆರೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...

Like our news?