ಬಸ್ ನಿಲ್ದಾಣದಲ್ಲಿ ಮಾಂಗಲ್ಯ ಸರ ಎಗರಿಸಿದ ಕಳ್ಳ ; ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ...!

Fri, Sep 03, 2021


ವಿಜಯಪುರ : ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದ ಓರ್ವ ಮಹಿಳೆಯ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ತಾಳಿಕೋಟೆ ಪಟ್ಟಣದಲ್ಲಿ ನಡೆದಿದ್ದು ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಕಳೆದ ಎರಡು ದಿನಗಳ ಹಿಂದೆ ಸೆಪ್ಟೆಂಬರ್ 1 ರಂದು ರೇಣುಕಾ ಪಾಟೀಲ್ ಎಂಬುವರು ತಾಳಿಕೋಟೆಯಿಂದ  ಯಾದಗಿರಿಗೆ ಪ್ರಯಾಣ ಬೆಳೆಸಿದರು ಆಗ ಬಸ್ಸಿಗಾಗಿ ಕಾದು ಕುಳಿತಿದ್ದ ವೇಳೆ ಮಹಿಳೆ ಪಕ್ಕದಲ್ಲಿ ಹೊಂಚು ಹಾಕಿ ನಿಂತು   38 ಗ್ರಾಂ.ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ.

ಘಟನೆ ಕುರಿತು ತಾಳಿಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...

Like our news?