ಬೆಳ್ಳಂಬೆಳಗ್ಗೆ ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ..!

Tue, Sep 14, 2021

ವಿಜಯಪುರ : ಬೆಳ್ಳಂಬೆಳಗ್ಗೆ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ ಗ್ರಾಮದ ಹತ್ತಿರ ನಡೆದಿದೆ...


ಜೇವರಗಿ ಕಡೆಯಿಂದ ಹಾಗೂ ಸಿಂದಗಿ ಕಡೆಯಿಂದ ಹೊರಟಿದ್ದ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಆಂದ್ರಪ್ರದೇಶದ ‌ಮೂಲದ ಇಬ್ಬರು ಹಾಗೂ ಕರ್ನಾಟಕ ಮೂಲದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.


ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ...

Like our news?