ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ; ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ ಪರಿಶೀಲನೆ..!

Thu, Sep 22, 2022

ವಿಜಯಪುರ : ವಿಜಯಪುರ ಜಿಲ್ಲಾ‌ ಉಪ ನೊಂದಣಿ  ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 


ಹೌದು  ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಜಿಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಯ ಮೇಲೆ ವಿಜಯಪುರ ಲೋಕಾಯುಕ್ತ ಎಸ್ ಪಿ ಅನಿತಾ ಹದ್ದಣವರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಸಾರ್ವಜನಿಕರಿಂದ ಕಛೇರಿಯಲ್ಲಿ ನಡೆಯುವ ಅವ್ಯವಹಾರ, ದಲ್ಲಾಳಿಗಳ ಹಾವಳಿ ಕುರಿತು ದೂರು ಬಂದಿರುವ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. .


ಇನ್ನು ಈ ಲೋಕಾಯುಕ್ತ ದಾಳಿಯಲ್ಲಿ ಅಧಿಕಾರಿಗಳಾದ ಅರುಣ್ ನಾಯಕ್, ಆನಂದ್ ಟಕ್ಕನವರ್, ಆನಂದ್ ದೋಣಿ ಹಾಗೂ ಇತರ ಅಧಿಕಾರಿಗಳು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ದಾಖಲೆ ಪರಿಶೀಲನೆ  ನಡೆಸುತ್ತಿದ್ದಾರೆ...

Like our news?