ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ..!

Wed, Sep 28, 2022

ಶಿವಮೊಗ್ಗ :  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ವಾರ್ಷಿ ಪರೀಕ್ಷೆಗಳಲ್ಲಿ ಶೇ. 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಪ್ರ.-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿಧ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ...

 

ಆಸಕ್ತರು ಇಲಾಖಾ ವೆಬ್‍ಸೈಟ್ https://bcwd.karnataka.gov.in ರಲ್ಲಿ ದಿ: 21/10/2022 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು  ತಿಳಿಸಿದ್ದು ; ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ಅಥವಾ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಬಹುದು...

Like our news?