ಎರಡು ದಿನಗಳ ಕಾಲ ಮದ್ಯ ಮಾರಾಟಕ್ಕೆ ನೀಷೇಧ ಹೇರಿದ ಜಿಲ್ಲಾಧಿಕಾರಿ..!

Sat, Nov 19, 2022

ಮಂಗಳೂರು : ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಪ್ರದತ್ತ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶ ಹೊರಡಿಸಿದ್ದಾರೆ...


ಹೌದು, ಇದೇ ನ.28ರ ಬೆಳಿಗ್ಗೆ 6 ಗಂಟೆಯಿಂದ 29ರ ಮಧ್ಯರಾತ್ರಿ 12 ಗಂಟೆಯವರೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿಯ ಪ್ರಶಾಂತ್ ಬಾರ್ ಮತ್ತು ರೆಸ್ಟೋ ರೆಂಟ್ ಹಾಗೂ ಬೆಳ್ಳಿ ಬಾರ್ ಮತ್ತು ರೆಸ್ಟೋ ರೆಂಟ್‍ಗಳನ್ನು  ಮುಚ್ಚುವಂತೆ ಆದೇಶದಲ್ಲಿ ಸೂಚಿಸಲಾಗಿದೆ...

Like our news?