PSI ನೇಮಕಾತಿ ಹಗರಣ : 12 ಮಂದಿಗೆ ಜಾಮೀನು ಮಂಜೂರು..!

Sat, Nov 19, 2022

ಬೆಂಗಳೂರು : PSI ನೇಮಕಾತಿ ಹಗರಣದಲ್ಲಿ ಬಂಧಿತರಾಗಿದ್ದ 12 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ...

ಹೌದು, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಒಟ್ಟು 12 ಜನ ಆರೋಪಿಗಳಿಗೆ ನಗರದ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ  ಕೆ.ಲಕ್ಷ್ಮೀನಾರಾಯಣ ಭಟ್ ಷರತ್ತುಬದ್ಧ ಜಾಮೀನು ನೀಡಿದ್ದಾರೆ... 


ಜಾಗೃತ್‌, ಸೋಮನಾಥ, ರಘುವೀರ್, ಮಮತೇಶ್‌ ಗೌಡ, ಸಿ.ಎಂ.ನಾರಾಯಣ , ಆರ್. ಮಧು, ಸಿ.ಕೆ.ದಿಲೀಪ್‌ ಕುಮಾರ್, ರಚನಾ ಹಣಮಂತ, ಪ್ರವೀಣ್‌ ಕುಮಾರ್ ರಾಘವೇಂದ್ರ, ಮಧ್ಯವರ್ತಿಗಳಾದ ಕೇಶವಮೂರ್ತಿ ಮತ್ತು ಶರತ್‌ ಕುಮಾರ್ ಜಾಮೀನು ಪಡೆದವರಾಗಿದಿದ್ದು ;  ಪೊಲೀಸ್ ಇಲಾಖೆಯ ವಿಭಾಗಾಧಿಕಾರಿ ಆರ್. ಮಂಜುನಾಥ್ ಮತ್ತು ಬ್ಯಾಡರ ಹಳ್ಳಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಹರೀಶ್ ಅವರಿಗೆ ಜಾಮೀನು ನಿರಾಕರಿಸಲಾಗಿದೆ...

Like our news?