ಚಾಲಕನ ನಿರ್ಲಕ್ಷ್ಯದಿಂದ ಖಾಸಗಿ ಬಸ್ ಪಲ್ಟಿ : 30 ಮಂದಿ ಆಸ್ಪತ್ರೆಗೆ ದಾಖಲು..!

Sun, Nov 20, 2022

ಚಿಕ್ಕಬಳ್ಳಾಪುರ : ಖಾಸಗಿ ಬಸ್ ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ  ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಬಳಿ ನಡೆದಿದೆ...

ಹೌದು,ಹಿಂದೂಪುರದಿಂದ ನಿನ್ನೆ ರಾತ್ರಿ ತಿರುಪತಿಗೆ ತೆರಳುತ್ತಿದ್ದ ಭಾರತಿ ಖಾಸಗಿ ಬಸ್‌ನಲ್ಲಿ 45 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು..ಈ ವೇಳೆ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ ಉರುಳಿಬಿದ್ದಿದೆ‌... 

ಬಸ್ ನಲ್ಲಿದ್ದ ಬಹುತೇಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೆಲವರಿಗೆ ಬೆನ್ನು ಮೂಳೆ, ಕೈ ಕಾಲು, ಕಣ್ಣಿನ ಭಾಗದಲ್ಲಿ ಗಾಯಗಳಾಗಿದ್ದು ;  ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ..ವಿಷಯ ತಿಳಿದು ಶಾಸಕ ಜೆಕೆ ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದಾರೆ.

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ...

Like our news?