ಮತ ಯಂತ್ರದಲ್ಲಿ ಭದ್ರವಾಗಿದೆ ಅಭ್ಯರ್ಥಿಗಳ ಭವಿಷ್ಯ....

Sun, May 13, 2018

ರಾಜ್ಯ ವಿಧಾನಸಭೆಗೆ ಇಂದು ನಡೆದ ಮತದಾನ ಪೂರ್ಣಗೊಂಡಿದ್ದು, ಶೇ.70 ಕ್ಕೂ ಅಧಿಕ ಮತದಾನವಾಗಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದ್ದು, ಅಂತಿಮ ಚಿತ್ರಣ  ದಿನಾಂಕ 15ಕ್ಕೆ  ಲಭ್ಯವಾಗಲಿದೆ.


ಚುನಾವಣಾ ಪೂರ್ವ ಹಾಗೂ ಚುನಾವಣೋತ್ತರದ ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳುತ್ತಿದ್ದು, ಮೇ 15 ರ ಚುನಾವಣಾ ಫಲಿತಾಂಶದ ಬಳಿಕ ಸ್ಪಷ್ಟ ಉತ್ತರ ದೊರೆಯಲಿದೆ.ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಇಂದು 222 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಿಧನದ ಕಾರಣ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದ ಹಿನ್ನಲೆಯಲ್ಲಿ ಚುನಾವಣೆ ಮುಂದೂಡಲ್ಪಟ್ಟಿದೆ.

Like our news?