ಪಾಕಿಗೆ ಮುಖಭಂಗ– ಭಾರತಕ್ಕೆ ಜಯ;ಅಜರ್ ಈಗ ಜಾಗತಿಕ ಉಗ್ರ ಘೋಷಣೆ... #MasoodAzhar #India #SecurityCouncil #Pakistan #China

Wed, May 01, 2019

ನ್ಯೂಯಾರ್ಕ್ವಿಶ್ವಸಂಸ್ಥೆಯಲ್ಲಿರುವ ಭಾರತೀಯ ರಾಯಭಾರಿ ಸೈಯ್ಯದ್ ಅಕ್ಬರುದ್ದೀನ್ ಅವರು ಈ ವಿಚಾರವನ್ನು ಖಚಿತ ಪಡಿಸಿದ್ದು, ಭಾರತದ ಪ್ರಸ್ತಾಪಕ್ಕೆ ಎಲ್ಲರು ಬೆಂಬಲ ನೀಡಿದ್ದರಿಂದ ಅಜರ್ ಜಾಗತಿಕ ಉಗ್ರನೆಂದು ಘೋಷಣೆಯಾಗಿದ್ದಾನೆ ಎಂದು ಹೇಳಿದ್ದಾರೆ.


ಮುಂಬೈ ಮತ್ತು ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಿಸಿದೆ. ಈ ಮೂಲಕ ಭಾರತಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಜಯ ಸಿಕ್ಕಿದ್ದು ಪಾಕಿಸ್ತಾನಕ್ಕೆ ಮುಖಭಂಗವಾಗಿದೆ.


ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವಂತೆ ಭಾರತ ವಿಶ್ವಸಂಸ್ಥೆಯಲ್ಲಿ ಬಹಳ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿತ್ತು. ಭಾರತದ ಈ ನಿರ್ಧಾರಕ್ಕೆ ಚೀನಾ ತನ್ನ ವಿಟೋವನ್ನು ಬಳಸಿ ನಾಲ್ಕು ಬಾರಿ ತಾಂತ್ರಿಕ ನೆಲೆಯಲ್ಲಿ ಅಡ್ಡಗಾಲು ಹಾಕಿತ್ತು. ಆದರೆ ಈಗ ತಾನು ಒಡ್ಡಿದ್ದ ತಾಂತ್ರಿಕ ತಡೆಯನ್ನು ಚೀನಾ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಈಗ ಜಾಗತಿಕ ಉಗ್ರನೆಂದು ಘೋಷಿಸಲ್ಪಟ್ಟಿದ್ದಾನೆ.

ಮಸೂದ್ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಣೆಯಾದ ಬಳಿಕ ಆತನ ಆಸ್ತಿ, ಪ್ರಯಾಣದ ಮೇಲೆ ನಿರ್ಬಂಧ ಬೀಳಲಿದೆ.

ಆತನ ಇಡೀ ಆಸ್ತಿ ಸರ್ಕಾರ ಪಾಲಾಗುತ್ತದೆ. ಬೇರೆ ಯಾವ ರಾಷ್ಟ್ರಗಳು ಕೂಡ ಆತನಿಗೆ ಹಣ ಸಹಾಯ ನೀಡಲು ಸಾಧ್ಯವಿಲ್ಲ.

Like our news?