ಕೊಡಗು : ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಡಿಸೆಂಬರ್, 30 ರಂದು ಬೆಳಗ್ಗೆ 10.30 ಗಂಟೆಗೆ ರೈತ, ರೈತ ಮಹಿಳೆಯರಿಗೆ ಕೂಡಿಗೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಣಬೆ ಬೇಸಾಯ ಮತ್ತು ಮಣ್ಣು ಮಾದರಿ ಸಂಗ್ರಹಣೆ ವಿಷಯದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಹಾಗೂ ಅಣಬೆ ಬೇಸಾಯದ ಪ್ರಗತಿಪರ ರೈತರಿಂದ ತರಬೇತಿ ನಡೆಯಲಿದೆ..
ಆಸಕ್ತ ರೈತರು ಈ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ...
Sign up here to get the latest post directly to your inbox.