ವಿಜಯಪುರದಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ; ಜಿಲ್ಲಾಧಿಕಾರಿಗಳಿಂದ ದ್ವಜಾರೋಹಣ..!

Thu, Jan 26, 2023

ವಿಜಯಪುರ : ಐತಿಹಾಸಿಕ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.


ಹೌದು ವಿಜಯಪುರ ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ  ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರಗೆ ಪೊಲೀಸರು ಗೌರವ ವಂದನ ಸಲ್ಲಿಸಿದರು. ತದನಂತರ ಪೊಲೀಸ್  ಇಲಾಖೆ , ಎನ್‌‌ಸಿಸಿ ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲ‌‌ನ ನಡೆಯಿತು. ಈ ಸಂದರ್ಭದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಎಸ್ಪಿ ಆನಂದಕುಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು...

Like our news?