ಮಡಿಕೇರಿ : ಕೊಡಗು ಜಿಲ್ಲಾಡಳಿತ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ(ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ)ಗಳ ಸಹಯೋಗದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಅಡಿಯಲ್ಲಿ ಫೆಬ್ರವರಿ, 28 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸೋಮವಾರಪೇಟೆ ತಾಲ್ಲೂಕಿನ ಸಂತ ಜೋಸೆಫರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ...
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ ಕ್ಕಿಂತ ಕಡಿಮೆ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು..
ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು https://forms.gle/hCmXRX8AqFb9oUHn7 ಗೂಗಲ್ ಲಿಂಕ್/ ಕ್ಯೂಆರ್ ಕೋಡ್ ಬಳಸಿಕೊಂಡು ನೋಂದಾಯಿಸಿಕೊಳ್ಳುವುದು. ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳದ ಅಭ್ಯರ್ಥಿಗಳು ಉದ್ಯೋಗಮೇಳ ನಡೆಯುವ ಸ್ಥಳದಲ್ಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಉದ್ಯೋಗಾಕಾಂಕ್ಷಿಗಳ ನೋಂದಣಿ ಹಾಗೂ ಸಂದರ್ಶನ ಉಚಿತವಾಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 10 ಸ್ವಯಂ ವಿವರ(ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವುದು..
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಕಛೇರಿಯನ್ನು ಖುದ್ದಾಗಿ ಅಥವಾ ದೂ.ಸಂ.08272-225851 ನ್ನು ಸಂಪರ್ಕಿಸಬಹುದು...
Sign up here to get the latest post directly to your inbox.