ಅಂಬೇಡ್ಕರ್ ಭವನ ನಿರ್ಮಾಣಕ್ಕೆ 75 ಲಕ್ಷ ಮಂಜೂರು..!

Wed, Mar 01, 2023

ಕೊಡಗು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮುದಾಯ ಚಟುವಟಿಕೆಗಳಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ 75 ಲಕ್ಷ ಮಂಜೂರು ಮಾಡಲಾಗಿದೆ...


ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನ/ ಡಾ.ಬಾಬು ಜಗಜೀವನ ರಾಂ ಭವನ/ ಮಹರ್ಷಿ ವಾಲ್ಮೀಕಿ ಭವನ ಮತ್ತು ಇತರೇ ಸಮುದಾಯಗಳ ಭವನ ನಿರ್ಮಾಣದ ಉದ್ದೇಶ ಮತ್ತು ಅಗತ್ಯ ಸೌಲಭ್ಯಗಳನ್ನು ಪರಿಗಣಿಸಿ ;  ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ 75 ಲಕ್ಷ ರೂ.ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ..‌.

Like our news?