ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಸೋಮವಾರ ನಡೆದಿದೆ.
ಬಿ.ಎಸ್ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.
ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಲಾಗಿರೋ ಪ್ಲಾಸ್ಟಿಕ್ ಚೀಲಗಳನ್ನು ಹಾಕಿದ್ದರು. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಕೂಡಲೆ ಎಚ್ಚತ್ತ ಪೈಲೆಟ್ ಹೆಲಿಕಾಪ್ಟ್ರನ್ನು ಬೇರೆಡೆ ತೆಗೆದುಕೊಂಡು ಹೋಗಿ ನಂತರ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಪೈಲೆಟ್ ಒಂದೆರಡು ಸುತ್ತು ಹೆಲಿಕಾಪ್ಟರ್ ಹಾರಾಟ ನಡೆಸಿ ಲ್ಯಾಂಡ್ ಮಾಡಿದ್ದಾರೆ.
Sign up here to get the latest post directly to your inbox.