ಮೀಸಲು ಅರಣ್ಯಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು ; ಎಕರೆಗಟ್ಟಲೆ ಅರಣ್ಯ ಬೆಂಕಿಗಾಹುತಿ..!

Tue, Mar 07, 2023

ಚಿಕ್ಕಮಗಳೂರು : ಅರಣ್ಯಕ್ಕೆ ಬೆಂಕಿ ಹಾಕಿದ ಓರ್ವನನ್ನು  ಪೊಲೀಸರು ಬಂಧಿಸಿದ್ದಾರೆ... 

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಖಾಂಡ್ಯದ ಕಸ್ಕೆಮನೆಯಲ್ಲಿರುವ ಮೀಸಲು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ ಮೂವರು ಕಿಡಿಗೇಡಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದು ; ಮತ್ತಿಬ್ಬರು ಪರಾರಿಯಾಗಿದ್ದಾರೆ...


ಬಂಧಿತನನ್ನು ರಘು ಎಂದು ಗುರುತಿಸಲಾಗಿದ್ದು ; ಕುಮಾರ್ ಹಾಗೂ ವೆಂಕಟೇಶ್ ಪರಾರಿಯಾಗಿದ್ದಾರೆ.. ಈ ಕಿಡಿಗೇಡಿಗಳ ಕೃತ್ಯಕ್ಕೆ ಬಸವನಕೋಟೆ ಮೀಸಲು ಅರಣ್ಯಕ್ಕೆ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ  ಮಾತ್ರವಲ್ಲ ಪ್ರಾಣಿಸಂಕುಲಗಳು  ನಾಶವಾಗಿದೆ...

Like our news?