ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದ ಸಿಎಂ ಬೊಮ್ಮಾಯಿ..!

Thu, Mar 16, 2023

ಬೆಳಗಾವಿ : ರಾಮದುರ್ಗ ತಾಲ್ಲೂಕಿನ ಬಟಕುರ್ಕಿಯಲ್ಲಿ ಬುಧವಾರ ನಡೆದ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಹಕ್ಕುಪತ್ರ ವಿತರಣಾ ಸಮಾವೇಶ, ಅನುಷ್ಠಾನ ಹಾಗೂ ಅರಿವು ಕಾರ್ಯಕ್ರಮದಲ್ಲಿ ವಿವಿಧ ತಾಂಡಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...


ಹಕ್ಕು ಪತ್ರ ವಿತರಿಸಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರ ಅನೇಕ ಕಾನೂನು ತೊಡಕುಗಳನ್ನು ಪರಿಹರಿಸಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ಕುರುಬರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದೆ. ಅದೇ ರೀತಿ ಕಾಡಂಚಿನಲ್ಲಿ ಹಾಗೂ ಖಾಸಗಿ ಜಾಗೆಯಲ್ಲಿ ಇರುವ ಜನರಿಗೂ ಹಕ್ಕುಪತ್ರವನ್ನು ನೀಡಲು ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.


ಸರಕಾರಿ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವುದರ ಜತೆಗೆ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ , ಮಲಪ್ರಭೆ ನದಿತೀರದಲ್ಲಿ ಪ್ರವಾಹಹಾನಿ ತಪ್ಪಿಸಲು 125 ಕೋಟಿ ರೂಪಾಯಿ ವೆಚ್ಚದಲ್ಲಿ ರಕ್ಷಣಾ ಗೋಡೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ , ಬೆಳೆಹಾನಿ ಪರಿಹಾರವಾಗಿ ಕೇಂದ್ರ ಸರಕಾರ ನೀಡುವ ಪರಿಹಾರಧನದ ಎರಡು ಪಟ್ಟು ಪರಿಹಾರವನ್ನು ರಾಜ್ಯ ಸರಕಾರ ನೀಡಿರುವುದು ದೇಶದಲ್ಲೇ ಮೊದಲು. ಇದು ನಮ್ಮ ಸರಕಾರದ ಬದ್ಧತೆಯಾಗಿದೆ. ಹಿಂದಿನಂತೆ ಬಾಯಿಮಾತಿನಲ್ಲಿ ಪರಿಹಾರ ನೀಡುವ ಸರಕಾರ ಇದಲ್ಲ; ಪ್ರತಿಯೊಂದು ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಮೂಲಕ ಜನರ ಸಮಸ್ಯೆಗಳ ನಿವಾರಣೆಗೆ ಶ್ರಮಿಸಲಾಗಿದೆ ಎಂದು ಹೇಳಿದರು‌...

Like our news?