ಬೆಂಗಳೂರು : ಹಿಂದುತ್ವದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಹಿನ್ನಲೆ ನಟ ಚೇತನ್ ರನ್ನ ಅರೆಸ್ಟ್ ಮಾಡಲಾಗಿದೆ..!
ಹೌದು ಸ್ಯಾಂಡಲ್ವುಡ್ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿಂದುತ್ವದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಹಿನ್ನಲೆಯಲ್ಲಿ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚೇತನ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿ ಪ್ರಕರಣ ದಾಖಲಾಗಿತ್ತು. ಹಲವು ಬಾರಿ ವಿಚಾರಣೆಗಾಗಿ ನೋಟಿಸ್ ನೀಡಿದ್ದರು ವಿಚಾರಣೆಗೆ ಗೈರು ಹಾಜರಾಗಿದ್ದರಿಂದ ಇಂದು ಶೇಷಾದ್ರಿಪುರಂ ಪೋಲೀಸರು ಬಂಧಿಸಿದ್ದಾರೆ...
Sign up here to get the latest post directly to your inbox.