ಶಿವಮೊಗ್ಗ : ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಭಾರತೀಯ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ನೊಂದಾಯಿಸಲು ಅಧಿಸೂಚನೆ ಹೊರಡಿಸಿದೆ.
ಅರ್ಜಿ ಸಲ್ಲಿಸಲು ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.50% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮಾ ವಿಭಾಗದ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಫಾರ್ಮೇಷನ್ ಟೆಕ್ನಾಲಜಿಯಲ್ಲಿ) ಶೇ.50% ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ವಯಸ್ಸು ( 26-12-2002 ರಿಂದ 26-06-2006) 17.5 ರಿಂದ 21 ವರ್ಷಗಳನ್ನು ಒಳಗೊಂಡಿರುವ ಅವಿವಾಹಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ...
ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರಗಳಿಗೆ ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ https://agnipathvayu.cdac.in ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಶಿವಮೊಗ್ಗ ಇವರನ್ನು ನೇರವಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮೂಲಕ ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ...
Sign up here to get the latest post directly to your inbox.