ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಪ್ರಚಾರ ಮಾಡಬೇಕಾದರೆ ಪೂರ್ವಾನುಮತಿ ಕಡ್ಡಾಯ..!

Sun, Apr 02, 2023

ಮಡಿಕೇರಿ : ವಿಧಾನಸಭೆ ಚುನಾವಣೆ ಸಂಬಂಧ ಸಂಭಾವ್ಯ ಅಭ್ಯರ್ಥಿಗಳು, ಅಭ್ಯರ್ಥಿಗಳು ಅಥವಾ ಸ್ವತಂತ್ರ ಸ್ಪರ್ಧಿಗಳು ಮುದ್ರಣ, ವಿದ್ಯುನ್ಮಾನ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ‘ವಿಷಯ ಆಧಾರಿತ’ (ಕಂಟೆಂಟ್)  ಜಾಹೀರಾತು ಪ್ರಕಟಿಸುವವರು ಮಾಧ್ಯಮ ದೃಢೀಕರಣ ಮತ್ತು ನಿರ್ವಹಣಾ ಸಮಿತಿ (ಎಂಸಿಎಂಸಿ) ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ಪಷ್ಟ ಪಡಿಸಿದ್ದಾರೆ...


ಮುದ್ರಣ, ವಿದ್ಯುನ್ಮಾನ ಹಾಗೂ ಸಾಮಾಜಿಕ ಮಾಧ್ಯಮಗಳಾದ ಫೇಸ್ ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್, ಟೆಲಿಗ್ರಾಂ, ವಾಟ್ಸಾಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ವಿಷಯಾಧಾರಿತ(ಕಂಟೆಂಟ್) ಜಾಹೀರಾತು ಪ್ರಸಾರ ಮಾಡುವ ಮೊದಲು ನಗರದ ಜಿಲ್ಲಾಡಳಿತ ಭವನದ ಮೂರನೇ ಮಹಡಿಯಲ್ಲಿರುವ ‘ಎಂಸಿಎಂಸಿ’ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಮತ್ತುಚುನಾವಣಾ ಆಯೋಗದ ನಿರ್ದೇಶನದಂತೆ ಪಕ್ಷದ ಚಿಹ್ನೆ ಬಳಸಿ ಜಾಹೀರಾತು ಪ್ರಚಾರ ಮಾಡಬೇಕಾದರೆ ಪೂರ್ವ ಅನುಮತಿ ಪಡೆಯಬೇಕು ಇದು ಸಾಮಾಜಿಕ ಮಾಧ್ಯಮಗಳಿಗೂ ಅನ್ವಯವಾಗಲಿದೆ ಎಂದರು...

Like our news?