ಶಿವಮೊಗ್ಗ | ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!

Sun, May 14, 2023

ಶಿವಮೊಗ್ಗ : 2023-24 ನೇ ಸಾಲಿನಲ್ಲಿ ಶಿರಾಳಕೊಪ್ಪದ ಶಿವಶರಣೆ ಅಕ್ಕಮಹಾದೇವಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್  ಸಂಸ್ಥೆಯಲ್ಲಿರುವ ಪ್ರಥಮ ಡಿಪ್ಲೋಮೊ ಕೋರ್ಸ್‍ಗಳಿಗೆ ಮೇರೆಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ..


ಎಸ್‍ಎಸ್‍ಎಲ್‍ಸಿ  ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಂದಿಗೆ ಮೀಸಲಾತಿ ಬಯಸುವ ಅಭ್ಯರ್ಥಿಗಳು ತಮ್ಮ  ಮೀಸಲಾತಿಯ ಪೂರಕ ದಾಖಲಾತಿಗಳೊಂದಿಗೆ ಮೇ -31 ರೊಳಗಾಗಿ ಸಂಸ್ಥೆಗೆ ನೇರವಾಗಿ ಸಲ್ಲಿಸಿ ಪ್ರವೇಶವನ್ನು ಪಡೆಯುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು.. 

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9480057999/9481066050/8867419851 ಗಳನ್ನು ಸಂಪರ್ಕಿಸಬಹುದು...

Like our news?