ವಿಜಯಪುರ: ಜಿಲ್ಲಾ ಕುರುಬರ ಸಂಘ ಹಾಗೂ ಹಾಲುಮತ ಸಮಾಜದ ಹಿರಿಯರ ಸಲಹಾ ಸಮಿತಿ ವತಿಯಿಂದ ಇಂದು ನಗರದ ಗಾಂಧಿ ವೃತ್ತದಲ್ಲಿ ಪೌರಾಢಳಿತ ಸಚಿವ ಸಿ.ಎಸ್.ಶಿವಳ್ಳಿ ಯವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಣ್ಣ.ಶಿರಶ್ಯಾಡ, ಹಾಗೂ ಹಾಲುಮತ ಸಮಾಜದ ಹಿರಿಯರ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀ ಅಶೋಕ ತಿಳಗೂಳಕರ ನಗರ ಘಟಕದ ರಾಜು ಕಗ್ಗೊಡ ಸಮಾಜದ ಪ್ರಮುಖರು ಭಾಗವಹಿಸಿದ್ದರು.
Sign up here to get the latest post directly to your inbox.