ಕಾಂಗ್ರೆಸ್ ನಿಂದ ಅಧಿಕೃತ ಘೋಷಣೆ | ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿಕೆಶಿ ಪದಗ್ರಹಣ..!

Thu, May 18, 2023

ದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸುತ್ತಾರೆ ಎಂದು ಕಾಂಗ್ರೆಸ್‌ ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ...


ದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾದ ಕೆಸಿ ವೇಣುಗೋಪಾಲ್ ಮತ್ತು ರಣ್‌ದೀಪ್ ಸಿಂಗ್ ಸುರ್ಜೇವಾಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ; ಮೇ 20ರಂದು ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ, ಅಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಾರೆ. ಇದರ ಜೊತೆಗೆ ಆ ದಿನವೇ ಕೆಲವು ಶಾಸಕರು ಸಚಿವರಾಗಿಯೂ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್​ ತಿಳಿಸಿದರು...

Like our news?