ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್-ಇಂಟರ್‌ವ್ಯೂವನ್ನು ಮೇ 26ರಂದು ಬೆಳಿಗ್ಗೆ 10.30 ರಿಂದ 2.30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ...
ಜಿಯೋ ಮತ್ತು ಎಂ.ಎನ್.ಸಿ ಕಂಪನಿ (ಸೇಂಟ್ ಗೋಬಿನ್) ಬೆಂಗಳೂರು ಇವರು ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಲ್ಲರಿಗೂ ಉಚಿತ ಪ್ರವೇಶವಿದ್ದು, ಪಿಯುಸಿ, ಐ.ಟಿ.ಐ., (ಆಲ್ ಟ್ರೇಡ್) ಹಾಗೂ ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ...
18 ರಿಂದ 30 ವರ್ಷದೊಳಗಿನ ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ(ರಿಜುಮ್) ಹಾಗೂ ಪಾಸ್ ಫೋಟೊ ಅಳತೆಯ ಭಾವಚಿತ್ರಗಳೊಂದಿಗೆ ವಾಕ್ ಇನ್-ಇಂಟರ್‌ವ್ಯೂವಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂರವಾಣಿ ಸಂಖ್ಯೆ: 08539-220859, ಮೊ.ಸಂ: 8431525339 ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ್ ತಿಳಿಸಿದ್ದಾರೆ...
Sign up here to get the latest post directly to your inbox.