KSRTC ಅಧಿಕೃತ ಪ್ರಕಟಣೆ | ಸ್ಟೂಡೆಂಟ್ ಬಸ್ ಪಾಸ್ ಅವಧಿ ಜೂ. 15 ರವರೆಗೆ ವಿಸ್ತರಣೆ ..!

Wed, May 31, 2023

ಬೆಂಗಳೂರು : ರಾಜ್ಯಾದ್ಯಂತ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜೂ.15ರವರೆಗೆ ವಿಸ್ತರಣೆಯಾಗಿದೆ ಎಂದು ಸಾರಿಗೆ ಇಲಾಖೆ ಅಧಿಕೃತವಾಗಿ ತಿಳಿಸಿದೆ...


ಈ ಬಾರಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸು ಪಡೆಯಲು ಕಾಲಾವಕಾಶ ನೀಡಬೇಕಾಗಿರುವುದರಿಂದ  ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಬೇಕಿರುವುದರಿಂದ ಜೂ. 15 ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ...


ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಶಾಲಾ / ಕಾಲೇಜುಗಳಿಗೆ ದಾಖಲಾಗಿರುವ ಸಂಬಂಧದ ಶುಲ್ಕ ಪಾವತಿ ರಸೀದಿ ಅಥವಾ. 2022-23ನೇ ಸಾಲಿನ ವಿದ್ಯಾರ್ಥಿ ಬಸ್ಪಾಸ್ ತೋರಿಸಿ ವಿದ್ಯಾರ್ಥಿಗಳು . ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ...

Like our news?