ಎರೆಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಾಯಗೊಂಡವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವ ಮೂಲಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಾನವೀಯತೆ ಮೆರೆದಿದ್ದಾರೆ.
ಹೌದು ಚಿತ್ರದುರ್ಗದ ಗೋನೂರು ಹೈವೆಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗದಗ ಮೂಲದ ದಿವ್ಯತ್ವ, ಪ್ರೀಯಾಂಕ, ಗಾಯತ್ರಿ ಎಂಬವರಿಗೆ ಗಾಯಗಳಾಗಿವೆ.
ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಹೊರಟ್ಟಿ ಯವರು ಅಪಘಾತ ಕಂಡು ತಕ್ಷಣ ಕಾರಿಂದ ಇಳಿದು ನೆರವಿಗೆ ಧಾವಿಸಿ, ಘಟನೆ ಸ್ಥಳದಲ್ಲಿಯೇ ನಿಂತು ಅಂಬ್ಯುಲೆನ್ಸ್ ಕರೆಸಿ ತಕ್ಷಣ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆ ಕುರಿತಂತೆ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ...
Sign up here to get the latest post directly to your inbox.