ಬರ ಘೋಷಣೆ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಒಂದು ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲು; ಉಪ ಮುಖ್ಯಮಂತ್ರಿ ಡಿಕೆಶಿ ಸ್ಪಷ್ಟಣೆ..!

Fri, Nov 03, 2023

ಹುಬ್ಬಳ್ಳಿ : ನಮ್ಮ‌ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ, ನಮ್ಮಲ್ಲಿ ಅಸಮಾಧಾನ ಎಲ್ಲಿ ಇದೆ..?


ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಮಾಡಲು ಆಗುತ್ತಿಲ್ಲ.ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದ್ರೂ, ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲವೆಂದು ಬಿಜೆಪಿಗೆ ಟೀಕೆ ಮಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದವಾಗಲಿದೆ. ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನ ನೇಮಕ ಮಾಡಲಾಗಿತ್ತು. 75% ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರುಗಳನ್ನು ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ದ ಮಾಡಿಕೊಂಡಿದ್ದಾರೆ. ಅವರು ಇನ್ನೂ ವರದಿಯನ್ನ ಕೊಟ್ಟಿಲ್ಲ. ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ ಎಂದರು.

ಇನ್ನು ಕರ್ನಾಟಕಕ್ಕೆ 50 ವರ್ಷ ಎಲ್ಲರಿಗೂ ಇದೊಂದು ಸುವರ್ಣಾವಕಾಶ. ಇಡೀ ವರ್ಷ ಹಬ್ಬದ ಆಚರಣೆಗೆ ತೀರ್ಮಾನ ಮಾಡಿದ್ದೇವೆ. ವಿಜಯನಗರ ನಾಡು ಹಂಪಿಯಿಂದ ಜ್ಯೋತಿ ಶುರುವಾಗಿದೆ. ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಮುಂದಿನ ಭಾಗವಾಗಿ ಇವತ್ತು ಗದಗನಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳು ಭುವನೇಶ್ವರಿ ಭವನವನ್ನು ಕಟ್ಟಿಸಲು ತೀರ್ಮಾನ ಮಾಡಿದ್ದಾರೆ. ಇವತ್ತು 10 ಜನ ಮಂತ್ರಿಗಳು ಗದಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಬಿಜೆಪಿಯವರು ಬರ ಸಮೀಕ್ಷೆ ಮಾಡಲಿ, ಅವರು ದೆಹಲಿಗೆ ಹೋಗಿ ವರದಿ ಕೊಡಲಿ. ಚಲುವರಾಯ ಸ್ವಾಮಿ, ಕೃಷ್ಣ ಭೈರೆಗೌಡ್ರ ತಂಡ ಬರ ಅಧ್ಯಯನ ಮಾಡಿದೆ. ಎಲ್ಲಾ ಜಿಲ್ಲೆಗಳಿಗೆ ಹೋಗಿ ಅಧ್ಯಯನ ಮಾಡಿ, 175 ತಾಲೂಕಗಳನ್ನ ಬರ ಎಂದು ಘೋಷಣೆ ಮಾಡಿದೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿ ಖಾತೆಯಲ್ಲಿ ಒಂದು ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಡಲಾಗಿದೆ ಎಂದರು...

Like our news?