ವಿಜಯಪುರ : ರಾಷ್ಟ್ರೀಯ ಹೆದ್ದಾರಿಯ ರಸ್ತೆಯಲ್ಲೇ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ...
ಹೌದು ಜನತಾ ಟ್ರಾವೆಲ್ಸ್ ಗೆ ಸೇರಿದ ಬಸ್ ನಿನ್ನೆ ಬೆಂಗಳೂರಿನಿಂದ ವಿಜಯಪುರಕ್ಕೆ ಪ್ರಯಾಣಿಕರನ್ನ ಹೊತ್ತು ಸಾಗುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಹಿಟ್ನಳ್ಳಿ ಬಳಿ
ಟಾಯರ್ ಬ್ಲಾಸ್ಟಾಗಿ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದ್ದು ಬಸ್ ನಲ್ಲಿದ್ದ ಪ್ರಯಾಣಿಕರು ಬಚಾವ್ ಆಗಿದ್ದು ಪ್ರಯಾಣಿಕರ ಬಟ್ಟೆ,ಆಭರಣಗಳು, ನಗದು ಸೇರಿದಂತೆ ಬೆಲೆ ಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿದೆ...
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಅಗ್ನಿ ಶಾಮಕದಳ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಸಂಭವಿಸಿದೆ...
Sign up here to get the latest post directly to your inbox.