ಭಾರಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಖಡಕ್ ಸೂಚನೆ ನೀಡಿದ ಸಚಿವ ಎಂ.ಬಿ.ಪಾಟೀಲ್..!

Wed, Sep 25, 2024

ವಿಜಯಪುರ : ಭಾರಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ ನೀಡಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು..!


ಹೌದು ವಿಜಯಪುರ ನಗರ ಹಾಗೂ ಜಿಲ್ಲೆಯಾದಾಂತ್ಯ ಭಾರಿ ಮಳೆಯಾಗಿದ್ದು, ರಸ್ತೆಯಲ್ಲದೇ ಹಳ್ಳ ಕೊಳ್ಳಗಳು ಸಹ ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಿಲ್ಲಾಡಳಿತ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಜನರ ನೆರವಿಗೆ ತೆರಳುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ..

ಇಂದು ನಗರ ಮತ್ತು ಜಿಲ್ಲೆಯಾದ್ಯಂತ ಸಂಚರಿಸಿ ಜನರಿಗೆ ಸಾಂತ್ವನ ಮತ್ತು ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು...

Like our news?