ವಿಜಯಪುರ : ಪಂಚಮಸಾಲಿ 2ಎ ಮೀಸಲಾತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ವೇಳೆಯಲ್ಲಿ ಲಫಂಗ್ ಸಿಎಂ ಸಿದ್ದರಾಮಯ್ಯ ಎಂದಿದ್ದ ಸ್ವಾಮೀಜಿ ಕ್ಷಮೆಯಾಚಿಸಿದ್ದಾರೆ...
ಹೌದು ಲಫಂಗ್ ಸಿಎಂ ಸಿದ್ದರಾಮಯ್ಯ ಮೀಸಲಾತಿ ನೀಡಲ್ಲ , ಸಿಎಂ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದೆ , ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೂಡಲಸಂಗಮ ಜಯಮೃತ್ಯುಂಜಯ ಶ್ರೀಗಳ ಹೆಗಲ ಮೇಲೆ ಸಿದ್ದರಾಮಯ್ಯ ಹಾಕಿದ್ದರು. ನಾನು ಆಗಿದ್ರೇ ಸಿಎಂ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದೆ ಆದ್ರೇ, ಶ್ರೀಗಳು ಸುಮ್ಮನೆ ಇದ್ರು ಎಂದು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಭಾಷಣದ ವೇಳೆ ವಿಜಯಪುರದ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು...
ಸ್ವಾಮಿಜಿಯ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಕ್ಷಮೆಯಾಚಿಸಿದ್ದಾರೆ..
Sign up here to get the latest post directly to your inbox.