ಬೆಂಗಳೂರು : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಅವರು ಮಂಗಳವಾರ ವಿಧಿವಶರಾಗಿದ್ದಾರೆ.
ಹೌದು ಇಂದು ಬೆಳಗಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರು ಮನೆಗೆ ಆಗಮಿಸಿದ್ದರು. ಬೆಳಗ್ಗೆ 3:30ಕ್ಕೆ ವೈದ್ಯರು ಎಸ್‌ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದರು. ಇಂದು ಬೆಳಗ್ಗೆ ಮನೆಯಿಂದ ಚೆಕಪ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು ಎನ್ನಲಾಗಿದೆ.
ಅಭಿಮಾನಿಗಳಿಗಾಗಿ ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲಾಗುತ್ತದೆ. ಸದಾಶಿವನಗರ ಎಸ್ ಎಂ ಕೃಷ್ಣ ಮನೆ ಬಳಿ ಪೊಲೀಸರ ಅಲರ್ಟ್ ಆಗಿದ್ದು, ನಿವಾಸದ ಅಕ್ಕಪಕ್ಕ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆ ಕಲ್ಪಿಸಿದ್ದಾರೆ...
Sign up here to get the latest post directly to your inbox.