ವಿಜಯಪುರ : ವಿಜಯಪುರ ಜಿಲ್ಲೆಯ ಕುವರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ...
ಪತ್ರಕರ್ತ ರಾಹುಲ್ ಆಪ್ಟೆಯವರ ಸುಪುತ್ರಿ ಶೃದ್ಧಾ ಅವರನ್ನು ನಗರದ ಸಾಯಿ ಗಾರ್ಡನ್ ಮೈದಾನದಲ್ಲಿ ನಡೆದ ಭಗವದ್ಗೀತಾ ಅಭಿಯಾನ 2024 ರಾಜ್ಯ ಮಟ್ಟದ ಮಹಾಸಮರ್ಪಣೆ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು, ವಿಜಯಪುರದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಸಿಂದಗಿ ಸಾರಂಗಮಠದ ಶ್ರೀಗಳು ಸೇರಿದಂತೆ ಸ್ವಾಮೀಜಿಗಳು ಹಾಗೂ ಭಗವದ್ಗೀತಾ ಅಭಿಯಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ, ಭಗವದ್ಗೀತಾ ಅಭಿಯಾನ ಅವರು ಆಯೋಜನೆ ಮಾಡಿದ್ದ ಸ್ಪರ್ಧೆಯಲ್ಲಿ ಶೃದ್ದಾ ಆಪ್ಟೆ ಸಂಸ್ಕೃತದಲ್ಲಿ ಭಗವದ್ಗೀತಾ ಬಗ್ಗೆ ಭಾಷಣ ಮಾಡಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.
Sign up here to get the latest post directly to your inbox.