ವಿಜಯಪುರ : ನಗರದಲ್ಲಿ ಇತ್ತೀಚೆಗೆ ಘಟಿಸುತ್ತಿದ್ದ ಮನೆ, ಇತರೆ ಕಳ್ಳತನ ಹಾಗೂ ಮೋಸ ಮಾಡಿ ನಕಲಿ ಬಂಗಾರದ ನಾಣ್ಯಗಳನ್ನು ಕೊಟ್ಟು ಹಣ ತೆಗೆದುಕೊಂಡ ಪ್ರಕರಣಗಳಲ್ಲಿಯ ಆರೋಪಿತರ ಪತ್ತೆ ಕುರಿತು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಾರಿಯಾದ ಲಕ್ಷ್ಮಣ ನಿಂಬರಗಿ ಅವರು ಮಾಹಿತಿ ನೀಡಿದರು.
ಹೌದು ವಿಜಯಪುರ ನಗರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ನಗರದಲ್ಲಿ ಇತ್ತಿಚಿಗೆ ನಡೆದ ಮನೆ ಕಳ್ಳತನ ಮತ್ತು ಇತರೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಪತ್ತೆ ಹಚ್ಚಲು ಹೆಚ್ಚುವರಿ ಪೊಲಿಸ್ ಅಧಿಕ್ಷಕರಾದ ಶಂಕರ ಮಾರಿಹಾಳ ಅವರ ನೇತ್ರತ್ವದಲ್ಲಿ ತಂಡ ರಚನೆ ಮಾಡಿ. ಖಚಿತ ಮಾಹಿತಿಯನ್ನು ಕಲೆಹಾಕಿ ಕಾನೂನು ಸಂಘರ್ಷಕ್ಕೊಳಪಟ್ಟ ಒಬ್ಬ ಬಾಲಕ ಸೇರಿದಂತೆ ಒಟ್ಟು 14 ಜನ ಆರೋಪಿತರನ್ನು ದಸ್ತಗಿರಿ ಮಾಡಿ ವಿಜಯಪುರ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 12 ಸ್ವತ್ತಿನ ಪ್ರಕರಣಗಳಲ್ಲಿ ಒಟ್ಟು- 271 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ ನಗದು ಹಣ-30,00,000/- ರೂಪಾಯಿ ಹಾಗೂ ವಿವಿಧ ಕಂಪನಿಯ 04 ಮೋಟರ ಸೈಕಲಗಳು, ಒಂದು T&H 210 ಕಂಪನಿಯ ಹಿಟ್ಯಾಚ್ BREAKER, ಒಂದು VOLTAS COMPANY AC ಈ ರೀತಿಯಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು 67,79,500/- ರೂ ಕಿಮ್ಮತ್ತಿನ ವಸ್ತುಗಳನ್ನು ಜಪ್ತ ಪಡಿಸಿಕೊಂಡು, ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದರು..ಇನ್ನು ಸದರಿ ಪತ್ತೆ ಕಾರ್ಯದಲ್ಲಿ ಕಾರ್ಯನಿರ್ವಹಿಸಿದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯವರ ಕರ್ತವ್ಯವನ್ನು ಶ್ಲಾಘಿಸಿದರು...
Sign up here to get the latest post directly to your inbox.