ಸಂತ್ರಸ್ತ ಕಾರ್ಮಿಕರಿಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ..!

Fri, Jan 24, 2025

ವಿಜಯಪುರ : ನಗರದ ಹೊರ ವಲಯದ ಬಸವ ನಗರದ ಖೇಮು ರಾಠೋಡ ಮಾಲಿಕತ್ವದ ಇಟ್ಟಂಗಿ ಬಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದ ಹಲ್ಲೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನ ಹೇಳಿದರು...  


ಹೌದು ಮಾಜಿ ಸಚಿವ ಹೆಚ್. ಆಂಜನೇಯ ಭೇಟಿ ಮಾಡಿ ಸಾಂತ್ವನ ಹೇಳುವ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ ಆಂಜನೇಯ ಸಿಎಂ ಸಿದ್ದರಾಮಯ್ಯನವರಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದ ಕಾರ್ಮಿಕರನ್ನು  ಸಿಎಂ ಸಿದ್ದರಾಮಯ್ಯರ ಜೊತೆಗೆ ದೂರವಾಣಿಯಲ್ಲಿ ಕಾರ್ಮಿಕರನ್ನು ಮಾತನಾಡಿಸಿದ್ದಾರೆ ,  ಸಿಎಂ ಸಿದ್ದರಾಮಯ್ಯ ಕೂಡಾ ಸಾಂತ್ವನ ತಿಳಿಸಿದ್ದಾರೆ , ಇನ್ನೂ ಮಾಜಿ ಸಚಿವ ಹೆಚ್ ಆಂಜನೇಯ ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಎರಡು ಎಕರೆ ಜಮೀನು ಕೊಡಿಸುವ ಭರವಸೆ ನೀಡಿದ್ದಾರೆ...

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಸೇರಿದಂತೆ ಅನೇಕ ಮುಖಂಡರು  ಉಪಸ್ಥಿತರಿದ್ದರು

Like our news?