ವಿಜಯಪುರ : ನಗರದ ಹೊರ ವಲಯದ ಬಸವ ನಗರದ ಖೇಮು ರಾಠೋಡ ಮಾಲಿಕತ್ವದ ಇಟ್ಟಂಗಿ ಬಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದ ಹಲ್ಲೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ...
ಹೌದು ಇಂದು ವಿಜಯಪುರ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಸಚಿವರು ಈ ರೀತಿ ಹಲ್ಲೆ ದೌರ್ಜನ್ಯ ಮಾಡಿದವರು ರಾಕ್ಷಸರು ಎಂದರು ಹಲ್ಲೆ ಮಾಡಿ ವಿಡಿಯೋ ಮಾಡಿ ಹರಿ ಬಿಟ್ಟಿದ್ದಾರೆ ಅವರು ದೂರು ನೀಡಲು ಸಹ ಭಯಪಡುವಂತೆ ದೌರ್ಜನ್ಯ ವ್ಯಸಗಿದ್ದಾರೆ ನಾನು ಅಂದೇ ಜಿಲ್ಲಾಧಿಕಾರಿ ಹಾಗೂ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಕ್ರಮಕೈಗೊಳ್ಳಲು ತಿಳಿಸಿದ್ದೇ ಎಂದು ತಿಳಿಸಿದರು , ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ ಶಿವಾನಂದ ಮಾಸ್ತಿಹೊಳಿ , ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು...
Sign up here to get the latest post directly to your inbox.