ವಿಜಯಪುರ : ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿ ೬ ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ..
ಹೌದು ಮನಗೂಳಿ ಬಳಿ ಎಸ್ಯುವಿ- 300 ಹಾಗೂ ಖಾಸಗಿ ಬಸ್ ಭೀಕರ ಅಪಘಾತ ಸಂಭವಿಸಿದ್ದು ಕೆನರಾ ಬ್ಯಾಂಕ್ ಮ್ಯಾನೇಜರ್ ಸೇರಿ ಸ್ಥಳದಲ್ಲೇ ಅರು ಮಂದಿ ಸಾವಿಗೀಡಾಗಿದ್ದಾರೆ, ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಎಸ್ಯೂವಿ 300 ಆರಂಭದಲ್ಲಿ ಹೆದ್ದಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದು , ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್‌ಎಲ್ ಬಸ್‌ಗೆ ಡಿಕ್ಕಿ ಹೊಡೆದಿದೆ.
ಮಹಿಂದ್ರಾ ಎಸ್ಯೂವಿ 300 ನಲ್ಲಿದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಮಹೀಂದ್ರಾ ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್‌ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಭಾಸ್ಕರನ್ ಅವರ ಪುತ್ರ ಪ್ರವೀಣತೇಜ ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರದ ನೋಂದಣಿ (ಎಂ.ಎಚ್.13 ಬಿಎನ್ 8364) ಇರುವ ಮಹೀಂದ್ರಾ ಕಾರು ಮತ್ತು ವಿಆರ್‌ಎಲ್ ಬಸ್ (ಎಂ.ಎಚ್.12 ವಿಟಿ 7982) ಹಾಗೂ ಲಾರಿ (ಕೆಎ 22 ಎಎ 3117) ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ಮನಗೂಳಿ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ...
Sign up here to get the latest post directly to your inbox.