ವಿಜಯಪುರ : ಜಿಲ್ಲೆಯ ಕಾರ್ಮಿಕರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಘಟಕವನ್ನು ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಚಾಲನೆ ನೀಡಿದರು.
ಹೌದು ಕಾರ್ಮಿಕರ ಆರೋಗ್ಯ ಸೇವೆಗಾಗಿ, ಅವರಿರುವ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರಕಾರ ವಿನೂತನ ಸಂಚಾರಿ ಆರೋಗ್ಯ ಘಟಕವನ್ನು ಆರಂಭಿಸಿದ್ದು ವಿಜಯಪುರ ಜಿಲ್ಲೆಗೆ ಮೂರು ಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳುಳ್ಳ ವಾಹನಗಳನ್ನು ಒದಗಿಸಲಾಗಿದೆ , ಇಂದು ಎರಡು ವಾಹನಗಳಿಗೆ ಹಸಿರು ನಿಶಾನೆ ತೋರಿಸಿ ಲೋಕಾರ್ಪಣೆಗೊಳಿಸಲಾಯಿತು. ಶೀಘ್ರದಲ್ಲೇ ಮೂರನೇ ವಾಹನವನ್ನು ಸಹ ಸಾರ್ಜನಿಕರ ಸೇವೆಗೆ ಅರ್ಪಿಸಲಾಗುವುದು ಎಂದು ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ...
ಈ ಸಂಚಾರಿ ಘಟಕದ ಮೂಲಕ ತಪಾಸಣೆ ಮತ್ತು ಚಿಕಿತ್ಸೆ ಉಚಿತವಾಗಿ ಲಭ್ಯವಿದ್ದು, ವಿಶೇಷವಾಗಿ ಬಡವರು, ಕೂಲಿಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರು ಇದರ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ...
Sign up here to get the latest post directly to your inbox.