ವಿಜಯಪುರ : ಜನೌಷಧಿ ಕೇಂದ್ರ ಬಂದ್ ಮಾಡಿದ ಹಿನ್ನಲೆಯಲ್ಲಿ ವಿಜಯಪುರ ನಗರದ ಸರ್ಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿದರು
ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ ಹಾಗೂ ಮಾಜಿ ಸಚಿವ ಬೆಳ್ಳುಬ್ಬಿ ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರು, ಬಡವರ ಹೊಟ್ಟೆ ಮೇಲೆ ಕಲ್ಲು ಹಾಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಸರ್ಕಾರದ ಯೋಜನೆಯ ವಿರುದ್ದ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ, ರಾಮರಾಜ್ಯ ಮಾಡುತ್ತೇನೆ ಎಂದವರು ಇವರು ರಾವಣ ರಾಜ್ಯ ಮಾಡಿದ್ದಾರೆ, ರಾಕ್ಷಸ ರಾಜ್ಯ ಮಾಡಿದ್ದಾರೆ ಎಂದು ಮಾಜಿ ಸಚಿವ ಬೆಳ್ಳುಬ್ಬಿ ಆಕ್ರೋಶ ವ್ಯಕ್ತಪಡಿಸಿದರು...
ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ, ಎಸ್ ಕೆ ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ , ಮಾಜಿ ಮಹಾನಗರ ಪಾಲಿಕೆ ಸದಸ್ಯ ರವಿಕಾಂತ ಬಗಲಿ ಸೇರಿದಂತೆ ಹಲವರು ಭಾಗಿಯಾಗಿದ್ದರು...
Sign up here to get the latest post directly to your inbox.