ವಿಜಯಪುರ: ನಿನ್ನೆಯ ದಿನ ಹಾಡು ಹಗಲೇ ಜನಬೀಡು ಪ್ರದೇಶದಲ್ಲಿ ಸುಶೀಲ ಕಾಳೆ ಮೇಲೆ ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು , ಈ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ...
ಹೌದು ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿಜಯಪುರ ನಗರದ ಹೊರವಲಯದ ಇಟ್ಟಂಗಿಹಾಳ ಗ್ರಾಮದ ಬಳಿ ಇಬ್ಬರು ಅರೋಪಿಗಳು ಪರಾರಿ ಆಗುತ್ತಿರುವ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ಹಿಡಿಯಲು ಮುಂದಾದಾಗ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಆಗ ಆತ್ಮರಕ್ಷಣೆಗಾಗಿ ಗಾಂಧಿ ಚೌಕ ಸಿಪಿಐ ಪ್ರದೀಪ್ ತಳಕೇರಿ ಆರೋಪಿಗಳ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಸಿಪಿಐ ತಳಕೇರಿ ಒಟ್ಟು ಮೂರು ಸುತ್ತು ಗುಂಡು ಹಾರಿಸಿದ್ದು, ಆರೋಪಿ ಆಕಾಶ ಕಲ್ಲವ್ವಗೋಳ, ಸುಭಾಷ ಬಗಲಿ ಕಾಲಿಗೆ ತಲಾ ಒಂದೊಂದು ಗುಂಡು ಬಿದ್ದಿದೆ ಸದ್ಯ ನಾಲ್ಕು ಆರೋಪಿಗಳು ಪರಾರಿಯಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ...
Sign up here to get the latest post directly to your inbox.