ಹಿಂದು ದೇವಾಲಯ ಸರ್ಕಾರ ಸ್ವಾಧೀನ ನಡೆ , ವಿರೋಧಿಸಿ ಪ್ರತಿಭಟನೆ...!

Tue, Oct 28, 2025

ವಿಜಯಪುರ : ನಗರದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 


ಹೌದು ಖಾಸಗಿ ಟ್ರಸ್ಟ್ ಗೆ ಸಂಬಂಧಿಸಿದ ವಿಜಯಪುರದ ಐವತ್ತಕ್ಕೂ ಹೆಚ್ಚು ದೇವಾಲಯಗಳ ಆಸ್ತಿಯ ದಾಖಲೆಯಲ್ಲಿ ಮುಜರಾಯಿ ಎಂದು ನಮೂದಿಸಲು ಸರ್ಕಾರ ಮುಂದಾಗಿದ್ದು, ಕೂಡಲೇ ನಿರ್ಣಯವನ್ನು ವಾಪಾಸ್ಸು ಪಡೆಯುವಂತೆ ಒತ್ತಾಯಿಸಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ ವಿವಿಧ ಖಾಸಗಿ ಟ್ರಸ್ಟ್, ಸಮಿತಿಗಳಿಗೆ ಸೇರಿದ ದೇವಾಲಯವನ್ನು ಮುಜರಾಯಿ ಇಲಾಖೆಯ ತನ್ನ ಅಧೀನಕ್ಕೆ ಪಡೆದು ಕೊಳ್ಳುತ್ತಿರುವುದು ತಿಳಿದು ಬಂದಿದೆ. ದೇವಾಲಯಕ್ಕೆ ಸೇರಿದ ಆಸ್ತಿಗಳನ್ನು ಮುಜರಾಯಿ ಇಲಾಖೆ ಎಂದು ಉತಾರೆಗಳಲ್ಲಿ ನಮೂದಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಕೆಯಾಗಿದೆ, ಇದು ಸರಿಯಾದ ಕ್ರಮವಲ್ಲ ಎಂದರು. ಇನ್ನೂ ವಿಜಯಪುರ ಜಿಲ್ಲೆಯ 50 ಕ್ಕೂ ಹೆಚ್ಚು ದೇವಾಲಯಗಳಿಗೆ ಸಂಬಂಧಿಸಿದಂತೆ ತಹಶೀಲ್ದಾರರು ಪಾಲಿಕೆ ಆಯುಕ್ತರಿಗೆ ಈ ಖಾಸಗಿ ದೇವಾಲಯಗಳ ಆಸ್ತಿಗಳಲ್ಲಿ ಹಿಂದು ಧಾರ್ಮಿಕ ದತ್ತಿ ಇಲಾಖೆ ಕರ್ನಾಟಕ ಸರಕಾರ ಎಂದು ನಮೂದಿಸಲು ತಿಳಿಸಿರುವದು ಬೆಳಕಿಗೆ ಬಂದಿದೆ, ಈ ಎಲ್ಲ ದೇವಾಲಯಗಳು ಖಾಸಗಿ ದೇವಾಲಯಗಳು ಎಂದೇ ಪ್ರಸಿದ್ದಿ ಪಡೆದಿವೆ, ಈ ಎಲ್ಲ ದೇವಾಲಯಗಳು ಟ್ರಸ್ಟ್ ಅಡಿಯಲ್ಲಿಯೇ ನಿರ್ವಹಣೆಯಾಗುತ್ತಿವೆ, ಸರ್ಕಾರದಿಂದ ಯಾವೊಂದು ಅನುದಾನ ಪಡೆಯದೇ ನಡೆಯುತ್ತಿವೆ, ಈ ಎಲ್ಲ ವಾಸ್ತವ ಸಂಗತಿ ಗೊತ್ತಿದ್ದರೂ ಸಹ ವೈಯಕ್ತಿಕ ಹಿತಾಸಕ್ತಿಯಿಂದ ದೇವಾಲಯಗಳ ಖಾಸಗಿ ಆಸ್ತಿಗಳನ್ನು ಹಿಂದು ಧಾರ್ಮಿಕ ದತ್ತಿ ಇಲಾಖೆ ಅಡಿ ತಂದು ದೇವಾಲಯಗಳ ಮಾಲಿಕರಿಗೆ ತೊಂದರೆ ನೀಡಿ ಅವರ ಆಸ್ತಿ ಕಬಳಿಸುವ ಷಡ್ಯಂತ್ರ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದರು. ಈ ಸಂದರ್ಭದಲ್ಲಿ ವಿಡಿಎ ಮಾಜಿ ಅಧ್ಯಕ್ಷ ಭೀಮಶಂಕರ ಹದನೂರ, ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ, ಈರಣ್ಣ ಪಟ್ಟಣಶೆಟ್ಟಿ, ಪ್ರಭಾಕರ್ ಬೋಸಲೆ, ವಿಜಯ್ ಕೋರಳ್ಳಿ, ರವಿ ಕಲ್ಲೂರ, ಬಸವರಾಜ ತೊನಶ್ಯಾಳ, ರಾಜು ಬಿರಾದಾರ, ಸಂದೀಪ್ ಪಾಟೀಲ್, ಜಗದೀಶ್ ಮುಚ್ಚಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು....

Like our news?