ಬಾಗಲಕೋಟೆ : ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ (80) ನಿಧನ ಹೊಂದಿದ್ದಾರೆ. ..
ಹೌದು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಅವರು ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಇಂದು ಆರೋಗ್ಯ ಸ್ಥಿತಿ ಉಲ್ಬಣಿಸಿದ ಕಾರಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ...
Sign up here to get the latest post directly to your inbox.